Acts 25:3
ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
And desired | αἰτούμενοι | aitoumenoi | ay-TOO-may-noo |
favour | χάριν | charin | HA-reen |
against | κατ' | kat | kaht |
him, | αὐτοῦ | autou | af-TOO |
that | ὅπως | hopōs | OH-pose |
he would send for | μεταπέμψηται | metapempsētai | may-ta-PAME-psay-tay |
him | αὐτὸν | auton | af-TONE |
to | εἰς | eis | ees |
Jerusalem, | Ἰερουσαλήμ | ierousalēm | ee-ay-roo-sa-LAME |
laying | ἐνέδραν | enedran | ane-A-thrahn |
wait | ποιοῦντες | poiountes | poo-OON-tase |
in | ἀνελεῖν | anelein | ah-nay-LEEN |
the | αὐτὸν | auton | af-TONE |
way to | κατὰ | kata | ka-TA |
kill | τὴν | tēn | tane |
him. | ὁδόν | hodon | oh-THONE |
Cross Reference
1 Samuel 23:19
ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
Acts 26:9
ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
Acts 23:12
ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
Acts 9:24
ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
Acts 9:2
ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
John 16:3
ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
Luke 23:8
ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು.
Mark 6:23
ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.
Jeremiah 38:4
ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
Jeremiah 18:18
ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
Psalm 140:1
ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು.
Psalm 64:2
ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
Psalm 37:32
ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
Romans 3:8
(ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.