Genesis 21:9
ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
Genesis 21:9 in Other Translations
King James Version (KJV)
And Sarah saw the son of Hagar the Egyptian, which she had born unto Abraham, mocking.
American Standard Version (ASV)
And Sarah saw the son of Hagar the Egyptian, whom she had borne unto Abraham, mocking.
Bible in Basic English (BBE)
And Sarah saw the son of Hagar the Egyptian playing with Isaac.
Darby English Bible (DBY)
And Sarah saw the son of Hagar the Egyptian, whom she had borne to Abraham, mocking.
Webster's Bible (WBT)
And Sarah saw the son of Hagar the Egyptian, which she had borne to Abraham, mocking.
World English Bible (WEB)
Sarah saw the son of Hagar the Egyptian, whom she had borne to Abraham, mocking.
Young's Literal Translation (YLT)
and Sarah seeth the son of Hagar the Egyptian, whom she hath borne to Abraham, mocking,
| And Sarah | וַתֵּ֨רֶא | wattēreʾ | va-TAY-reh |
| saw | שָׂרָ֜ה | śārâ | sa-RA |
| אֶֽת | ʾet | et | |
| the son | בֶּן | ben | ben |
| of Hagar | הָגָ֧ר | hāgār | ha-ɡAHR |
| Egyptian, the | הַמִּצְרִ֛ית | hammiṣrît | ha-meets-REET |
| which | אֲשֶׁר | ʾăšer | uh-SHER |
| she had born | יָֽלְדָ֥ה | yālĕdâ | ya-leh-DA |
| unto Abraham, | לְאַבְרָהָ֖ם | lĕʾabrāhām | leh-av-ra-HAHM |
| mocking. | מְצַחֵֽק׃ | mĕṣaḥēq | meh-tsa-HAKE |
Cross Reference
Genesis 16:15
ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.
Galatians 4:29
ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.
Genesis 16:1
ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.
Psalm 44:13
ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
Hebrews 11:36
ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.
Galatians 4:22
ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.
Lamentations 1:7
ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
Proverbs 20:11
ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.
Psalm 42:10
ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.
Psalm 22:6
ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
Job 30:1
ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು
Nehemiah 4:1
1 ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
2 Chronicles 36:16
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
2 Chronicles 30:10
ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
2 Kings 2:23
ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
Genesis 17:20
ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
Genesis 16:3
ಅಬ್ರಾಮನು ಕಾನಾನ್‌ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.