Isaiah 1:5
ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
Why | עַ֣ל | ʿal | al |
מֶ֥ה | me | meh | |
should ye be stricken | תֻכּ֛וּ | tukkû | TOO-koo |
more? any | ע֖וֹד | ʿôd | ode |
ye will revolt | תּוֹסִ֣יפוּ | tôsîpû | toh-SEE-foo |
more: and more | סָרָ֑ה | sārâ | sa-RA |
the whole | כָּל | kāl | kahl |
head | רֹ֣אשׁ | rōš | rohsh |
sick, is | לָחֳלִ֔י | lāḥŏlî | la-hoh-LEE |
and the whole | וְכָל | wĕkāl | veh-HAHL |
heart | לֵבָ֖ב | lēbāb | lay-VAHV |
faint. | דַּוָּֽי׃ | dawwāy | da-WAI |
Cross Reference
Jeremiah 5:3
ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
Isaiah 31:6
ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ ಆತನ ಕಡೆಗೆ ತಿರುಗಿ ಕೊಳ್ಳಿರಿ.
Isaiah 9:13
ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
Revelation 16:8
ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.
Zephaniah 3:1
ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!
Daniel 9:8
ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.
Ezekiel 24:13
ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
Jeremiah 9:3
ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
Jeremiah 6:28
ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
Jeremiah 5:31
ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
Jeremiah 2:30
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
Isaiah 33:24
ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
Isaiah 9:21
ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
Isaiah 1:23
ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
Nehemiah 9:34
ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.
Hebrews 12:5
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
Jeremiah 5:5
ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
2 Chronicles 28:22
ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.