1 ಸಮುವೇಲನು 18:12 in Kannada

ಕನ್ನಡ ಕನ್ನಡ ಬೈಬಲ್ 1 ಸಮುವೇಲನು 1 ಸಮುವೇಲನು 18 1 ಸಮುವೇಲನು 18:12

1 Samuel 18:12
ಸೌಲನು ದಾವೀದನಿಗೆ ಭಯಪಟ್ಟನು; ಕರ್ತನು ಅವನ ಸಂಗಡ ಇದ್ದನು. ಕರ್ತನು ಸೌಲನ ಕಡೆಯಿಂದ ಹೊರಟು ಹೋಗಿದ್ದನು;

1 Samuel 18:111 Samuel 181 Samuel 18:13

1 Samuel 18:12 in Other Translations

King James Version (KJV)
And Saul was afraid of David, because the LORD was with him, and was departed from Saul.

American Standard Version (ASV)
And Saul was afraid of David, because Jehovah was with him, and was departed from Saul.

Bible in Basic English (BBE)
And Saul went in fear of David, because the Lord was with David and had gone away from Saul.

Darby English Bible (DBY)
And Saul was afraid of David, because Jehovah was with him, and had departed from Saul.

Webster's Bible (WBT)
And Saul was afraid of David, because the LORD was with him, and had departed from Saul.

World English Bible (WEB)
Saul was afraid of David, because Yahweh was with him, and was departed from Saul.

Young's Literal Translation (YLT)
And Saul is afraid of the presence of David, for Jehovah hath been with him, and from Saul He hath turned aside;

And
Saul
וַיִּרָ֥אwayyirāʾva-yee-RA
was
afraid
שָׁא֖וּלšāʾûlsha-OOL
of
מִלִּפְנֵ֣יmillipnêmee-leef-NAY
David,
דָוִ֑דdāwidda-VEED
because
כִּֽיkee
the
Lord
הָיָ֤הhāyâha-YA
was
יְהוָה֙yĕhwāhyeh-VA
with
עִמּ֔וֹʿimmôEE-moh
him,
and
was
departed
וּמֵעִ֥םûmēʿimoo-may-EEM
from
Saul.
שָׁא֖וּלšāʾûlsha-OOL

סָֽר׃sārsahr

Cross Reference

1 ಸಮುವೇಲನು 28:15
ಆಗ ಸಮುವೇಲನು ಸೌಲನಿಗೆ--ನೀನು ನನ್ನನ್ನು ಏರಿ ಬರ ಮಾಡಿ ಯಾಕೆ ವಿಶ್ರಾಂತಿಯನ್ನು ಕೆಡಿಸಿದಿ ಅಂದನು. ಅದಕ್ಕೆ ಸೌಲನು--ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ; ಯಾಕಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧ ಮಾಡುತ್ತಾರೆ; ಆದರೆ ದೇವರು ನನ್ನನ್ನು ಬಿಟ್ಟುಹೋದನು. ಆತನು ಪ್ರವಾದಿಗಳ ಮುಖಾಂತರ ವಾದರೂ ಸ್ವಪ್ನದ ಮುಖಾಂತರವಾದರೂ ನನಗೆ ಪ್ರತ್ಯುತ್ತರಕೊಡಲಿಲ್ಲ; ಆದದರಿಂದ ನಾನು ಮಾಡ ಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು ಅಂದನು.

1 ಸಮುವೇಲನು 18:29
ಸೌಲನು ದಾವೀದನಿ ಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು; ಸೌಲನು ಬಿಟ್ಟುಬಿಡದೆ ದಾವೀದನಿಗೆ ಶತ್ರುವಾಗಿದ್ದನು.

1 ಸಮುವೇಲನು 18:15
ಕರ್ತನು ಅವನ ಸಂಗಡ ಇದ್ದನು. ಅವನು ಮಹಾಬುದ್ಧಿವಂತನಾಗಿ ನಡೆಯುವದನ್ನು ಸೌಲನು ನೋಡಿ ಅವನಿಗೆ ಭಯ ಪಟ್ಟಿದ್ದನು.

1 ಸಮುವೇಲನು 16:18
ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.

1 ಸಮುವೇಲನು 16:13
ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.

ಅಪೊಸ್ತಲರ ಕೃತ್ಯಗ 24:25
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.

ಅಪೊಸ್ತಲರ ಕೃತ್ಯಗ 7:9
ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು

ಲೂಕನು 8:37
ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.

ಮಾರ್ಕನು 6:20
ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.

ಮತ್ತಾಯನು 25:41
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.

ಹೋಶೇ 9:12
ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!

ಕೀರ್ತನೆಗಳು 53:5
ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.

ಕೀರ್ತನೆಗಳು 51:11
ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.

ಕೀರ್ತನೆಗಳು 48:3
ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.

1 ಸಮುವೇಲನು 22:13
ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು.

1 ಸಮುವೇಲನು 18:20
ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು.

1 ಸಮುವೇಲನು 16:4
ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.