ಕೊಲೊಸ್ಸೆಯವರಿಗೆ 3:19 in Kannada

ಕನ್ನಡ ಕನ್ನಡ ಬೈಬಲ್ ಕೊಲೊಸ್ಸೆಯವರಿಗೆ ಕೊಲೊಸ್ಸೆಯವರಿಗೆ 3 ಕೊಲೊಸ್ಸೆಯವರಿಗೆ 3:19

Colossians 3:19
ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ.

Colossians 3:18Colossians 3Colossians 3:20

Colossians 3:19 in Other Translations

King James Version (KJV)
Husbands, love your wives, and be not bitter against them.

American Standard Version (ASV)
Husbands, love your wives, and be not bitter against them.

Bible in Basic English (BBE)
Husbands, have love for your wives, and be not bitter against them.

Darby English Bible (DBY)
Husbands, love your wives, and be not bitter against them.

World English Bible (WEB)
Husbands, love your wives, and don't be bitter against them.

Young's Literal Translation (YLT)
the husbands! love your wives, and be not bitter with them;


Οἱhoioo
Husbands,
ἄνδρεςandresAN-thrase
love
ἀγαπᾶτεagapateah-ga-PA-tay
your

τὰςtastahs
wives,
γυναῖκαςgynaikasgyoo-NAY-kahs
and
καὶkaikay
be
not
μὴmay
bitter
πικραίνεσθεpikrainesthepee-KRAY-nay-sthay
against
πρὸςprosprose
them.
αὐτάςautasaf-TAHS

Cross Reference

1 ಪೇತ್ರನು 3:7
ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.

ಎಫೆಸದವರಿಗೆ 5:25
ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.

ಎಫೆಸದವರಿಗೆ 4:31
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.

ಆದಿಕಾಂಡ 2:23
ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.

ಯಾಕೋಬನು 3:14
ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

ಕೊಲೊಸ್ಸೆಯವರಿಗೆ 3:21
ತಂದೆಗಳೇ, ನಿಮ್ಮ ಮಕ್ಕಳು ಮನಗುಂದದಂತೆ ಅವರನ್ನು ಕೆಣಕಿ ಕೋಪವನ್ನೆಬ್ಬಿಸ ಬೇಡಿರಿ.

ಎಫೆಸದವರಿಗೆ 5:33
ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.

ಎಫೆಸದವರಿಗೆ 5:28
ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ.

ರೋಮಾಪುರದವರಿಗೆ 3:14
ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ.

ಲೂಕನು 14:26
ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.

ಮಲಾಕಿಯ 2:14
ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.

ಪ್ರಸಂಗಿ 9:9
ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.

ಙ್ಞಾನೋಕ್ತಿಗಳು 5:18
ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು.

ಆದಿಕಾಂಡ 24:67
ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.