ಙ್ಞಾನೋಕ್ತಿಗಳು 16:20 in Kannada

ಕನ್ನಡ ಕನ್ನಡ ಬೈಬಲ್ ಙ್ಞಾನೋಕ್ತಿಗಳು ಙ್ಞಾನೋಕ್ತಿಗಳು 16 ಙ್ಞಾನೋಕ್ತಿಗಳು 16:20

Proverbs 16:20
ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು.

Proverbs 16:19Proverbs 16Proverbs 16:21

Proverbs 16:20 in Other Translations

King James Version (KJV)
He that handleth a matter wisely shall find good: and whoso trusteth in the LORD, happy is he.

American Standard Version (ASV)
He that giveth heed unto the word shall find good; And whoso trusteth in Jehovah, happy is he.

Bible in Basic English (BBE)
He who gives attention to the law of right will get good; and whoever puts his faith in the Lord is happy.

Darby English Bible (DBY)
He that giveth heed to the word shall find good; and whoso confideth in Jehovah, happy is he.

World English Bible (WEB)
He who heeds the Word finds prosperity. Whoever trusts in Yahweh is blessed.

Young's Literal Translation (YLT)
The wise in any matter findeth good, And whoso is trusting in Jehovah, O his happiness.

He
that
handleth
a
matter
מַשְׂכִּ֣ילmaśkîlmahs-KEEL
wisely
עַלʿalal

דָּ֭בָרdāborDA-vore
shall
find
יִמְצָאyimṣāʾyeem-TSA
good:
ט֑וֹבṭôbtove
and
whoso
trusteth
וּבוֹטֵ֖חַûbôṭēaḥoo-voh-TAY-ak
in
the
Lord,
בַּיהוָ֣הbayhwâbai-VA
happy
אַשְׁרָֽיו׃ʾašrāywash-RAIV

Cross Reference

ಙ್ಞಾನೋಕ್ತಿಗಳು 19:8
ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣ ವನ್ನು ಪ್ರೀತಿಸುತ್ತಾನೆ; ವಿವೇಕವನ್ನು ಕೈಕೊಳ್ಳುವವನು ಒಳ್ಳೇದನ್ನು ಕಂಡುಕೊಳ್ಳುವನು.

ಕೀರ್ತನೆಗಳು 2:12
ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.

ಕೀರ್ತನೆಗಳು 34:8
ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.

ಙ್ಞಾನೋಕ್ತಿಗಳು 13:15
ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ.

ದಾನಿಯೇಲನು 1:19
ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು.

ದಾನಿಯೇಲನು 3:28
ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್‌ ಮೇಷಕ್‌ ಅಬೇದ್‌ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.

ದಾನಿಯೇಲನು 6:23
ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.

ಮತ್ತಾಯನು 10:16
ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.

ಎಫೆಸದವರಿಗೆ 1:12
ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.

ಯೆರೆಮಿಯ 17:7
ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು.

ಯೆಶಾಯ 30:18
ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

1 ಪೂರ್ವಕಾಲವೃತ್ತಾ 5:20
ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.

ಕೀರ್ತನೆಗಳು 125:1
ಕರ್ತನಲ್ಲಿ ಭರವಸವಿಡುವವರು ಚೀಯೋನ್‌ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.

ಕೀರ್ತನೆಗಳು 146:5
ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.

ಙ್ಞಾನೋಕ್ತಿಗಳು 8:35
ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.

ಙ್ಞಾನೋಕ್ತಿಗಳು 17:2
ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.

ಙ್ಞಾನೋಕ್ತಿಗಳು 22:19
ನಿನ್ನ ಭರವಸವು ಕರ್ತನಲ್ಲಿ ಇರುವಂತೆ ನಿನಗೆ ಈ ದಿವಸ ತಿಳಿಯ ಪಡಿಸಿದ್ದೇನೆ.

ಙ್ಞಾನೋಕ್ತಿಗಳು 24:3
ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;

ಯೆಶಾಯ 26:3
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.

ಆದಿಕಾಂಡ 41:38
ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.