Isaiah 2:8
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
Isaiah 2:8 in Other Translations
King James Version (KJV)
Their land also is full of idols; they worship the work of their own hands, that which their own fingers have made:
American Standard Version (ASV)
Their land also is full of idols; they worship the work of their own hands, that which their own fingers have made.
Bible in Basic English (BBE)
Their land is full of images; they give worship to the work of their hands, even to that which their fingers have made.
Darby English Bible (DBY)
And their land is full of idols; they bow themselves down to the work of their own hands, to that which their fingers have made.
World English Bible (WEB)
Their land also is full of idols. They worship the work of their own hands, That which their own fingers have made.
Young's Literal Translation (YLT)
And its land is full of idols, To the work of its hands it boweth itself, To that which its fingers have made,
| Their land | וַתִּמָּלֵ֥א | wattimmālēʾ | va-tee-ma-LAY |
| also is full | אַרְצ֖וֹ | ʾarṣô | ar-TSOH |
| idols; of | אֱלִילִ֑ים | ʾĕlîlîm | ay-lee-LEEM |
| they worship | לְמַעֲשֵׂ֤ה | lĕmaʿăśē | leh-ma-uh-SAY |
| the work | יָדָיו֙ | yādāyw | ya-dav |
| hands, own their of | יִֽשְׁתַּחֲו֔וּ | yišĕttaḥăwû | yee-sheh-ta-huh-VOO |
| that which | לַאֲשֶׁ֥ר | laʾăšer | la-uh-SHER |
| their own fingers | עָשׂ֖וּ | ʿāśû | ah-SOO |
| have made: | אֶצְבְּעֹתָֽיו׃ | ʾeṣbĕʿōtāyw | ets-beh-oh-TAIV |
Cross Reference
ಯೆರೆಮಿಯ 2:28
ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
ಯೆಶಾಯ 37:19
ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
ಕೀರ್ತನೆಗಳು 115:4
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಹೋಶೇ 8:6
ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.
ಹೋಶೇ 12:11
ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
ಹೋಶೇ 13:2
ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
ಹೋಶೇ 14:3
ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.
ಅಪೊಸ್ತಲರ ಕೃತ್ಯಗ 17:16
ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.
ಪ್ರಕಟನೆ 9:20
ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.
ಯೆಹೆಜ್ಕೇಲನು 16:23
ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;)
ಯೆರೆಮಿಯ 11:13
ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
2 ಪೂರ್ವಕಾಲವೃತ್ತಾ 27:2
ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
2 ಪೂರ್ವಕಾಲವೃತ್ತಾ 28:2
ಅವನು ಇಸ್ರಾಯೇಲಿನ ಅರಸುಗಳ ಮಾರ್ಗಗಳಲ್ಲಿ ನಡೆದು ಬಾಳನಿಗೋಸ್ಕರ ಎರಕ ಹೊಯಿದ ವಿಗ್ರಹಗಳನ್ನು ಮಾಡಿಸಿದನು.
2 ಪೂರ್ವಕಾಲವೃತ್ತಾ 28:23
ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.
2 ಪೂರ್ವಕಾಲವೃತ್ತಾ 33:3
ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
ಯೆಶಾಯ 10:10
ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ
ಯೆಶಾಯ 17:8
ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು.
ಯೆಶಾಯ 44:15
ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು;
ಯೆಶಾಯ 57:5
ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
ಧರ್ಮೋಪದೇಶಕಾಂಡ 4:28
ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.