Index
Full Screen ?
 

ಯೆರೆಮಿಯ 20:8

Jeremiah 20:8 ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 20

ಯೆರೆಮಿಯ 20:8
ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.

For
כִּֽיkee
since
מִדֵּ֤יmiddêmee-DAY
I
spake,
אֲדַבֵּר֙ʾădabbēruh-da-BARE
I
cried
out,
אֶזְעָ֔קʾezʿāqez-AK
cried
I
חָמָ֥סḥāmāsha-MAHS
violence
וָשֹׁ֖דwāšōdva-SHODE
and
spoil;
אֶקְרָ֑אʾeqrāʾek-RA
because
כִּֽיkee
word
the
הָיָ֨הhāyâha-YA
of
the
Lord
דְבַרdĕbardeh-VAHR
was
made
יְהוָ֥הyĕhwâyeh-VA
reproach
a
לִ֛יlee
unto
me,
and
a
derision,
לְחֶרְפָּ֥הlĕḥerpâleh-her-PA
daily.
וּלְקֶ֖לֶסûlĕqelesoo-leh-KEH-les
כָּלkālkahl
הַיּֽוֹם׃hayyômha-yome

Cross Reference

ಯೆರೆಮಿಯ 6:10
ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.

2 ಪೂರ್ವಕಾಲವೃತ್ತಾ 36:16
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.

ಯೆರೆಮಿಯ 20:7
ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.

ಯೆರೆಮಿಯ 28:8
ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು.

ಪ್ರಲಾಪಗಳು 3:61
ಓ ಕರ್ತನೇ, ಅವರ ನಿಂದೆಯನ್ನೂ ನನಗೆ ವಿರುದ್ಧವಾದ ಅವರ ಎಲ್ಲಾ ಕಲ್ಪನೆಗಳನ್ನೂ ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ

ಲೂಕನು 11:45
ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.

ಇಬ್ರಿಯರಿಗೆ 11:26
ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.

ಇಬ್ರಿಯರಿಗೆ 13:13
ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.

1 ಪೇತ್ರನು 4:14
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.

ಯೆರೆಮಿಯ 19:7
ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.

ಯೆರೆಮಿಯ 18:16
ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.

ಯೆರೆಮಿಯ 17:27
ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.

ಯೆರೆಮಿಯ 5:1
ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.

ಯೆರೆಮಿಯ 5:6
ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.

ಯೆರೆಮಿಯ 5:15
ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.

ಯೆರೆಮಿಯ 6:6
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.

ಯೆರೆಮಿಯ 7:9
ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ

ಯೆರೆಮಿಯ 13:13
ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.

ಯೆರೆಮಿಯ 15:1
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.

ಯೆರೆಮಿಯ 15:13
ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.

ಯೆರೆಮಿಯ 4:19
ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.

Chords Index for Keyboard Guitar