Job 19:3
ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
Job 19:3 in Other Translations
King James Version (KJV)
These ten times have ye reproached me: ye are not ashamed that ye make yourselves strange to me.
American Standard Version (ASV)
These ten times have ye reproached me: Ye are not ashamed that ye deal hardly with me.
Bible in Basic English (BBE)
Ten times now you have made sport of me; it gives you no sense of shame to do me wrong.
Darby English Bible (DBY)
These ten times have ye reproached me; ye are not ashamed to stupefy me.
Webster's Bible (WBT)
These ten times have ye reproached me: ye are not ashamed that ye make yourselves strange to me.
World English Bible (WEB)
You have reproached me ten times. You aren't ashamed that you attack me.
Young's Literal Translation (YLT)
These ten times ye put me to shame, ye blush not. Ye make yourselves strange to me --
| These | זֶ֤ה | ze | zeh |
| ten | עֶ֣שֶׂר | ʿeśer | EH-ser |
| times | פְּ֭עָמִים | pĕʿāmîm | PEH-ah-meem |
| have ye reproached | תַּכְלִימ֑וּנִי | taklîmûnî | tahk-lee-MOO-nee |
| not are ye me: | לֹֽא | lōʾ | loh |
| ashamed | תֵ֝בֹ֗שׁוּ | tēbōšû | TAY-VOH-shoo |
| strange yourselves make ye that | תַּהְכְּרוּ | tahkĕrû | ta-keh-ROO |
| to me. | לִֽי׃ | lî | lee |
Cross Reference
ಆದಿಕಾಂಡ 31:7
ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.
ದಾನಿಯೇಲನು 1:20
ಅರಸನು ಅವರ ಹತ್ತಿರ ವಿಚಾರಿಸಿದ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರ ರಿಗಿಂತಲೂ ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡರು.
ಕೀರ್ತನೆಗಳು 69:8
ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.
ಯೋಬನು 19:17
ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ.
ಯೋಬನು 18:4
ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?
ಯೋಬನು 15:11
ದೇವರ ಆದರಣೆಗಳು ನಿನಗೆ ಅಲ್ಪವೋ? ಗುಪ್ತವಾದದ್ದು ನಿನಗೆ ಏನಾದರೂ ಇದೆಯೋ?
ಯೋಬನು 15:4
ಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ.
ನೆಹೆಮಿಯ 4:12
ಅವರ ಬಳಿಯಲ್ಲಿ ವಾಸವಾಗಿರುವ ಯೆಹೂದ್ಯರು ನಮ್ಮ ಬಳಿಗೆ ಬಂದಾಗನೀವು ತಿರುಗುವ ಎಲ್ಲಾ ಸ್ಥಳಗಳಿಂದ ನಮ್ಮ ಮೇಲೆ ಬಂದಾರು ಎಂದು ನಮಗೆ ಹತ್ತುಸಾರಿ ಹೇಳಿದರು.
ಯೋಬನು 11:14
ನಿನ್ನ ಕೈಯಲ್ಲಿರುವ ಅಪರಾಧವನ್ನು ದೂರಮಾಡಿ ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಮಾಡಗೊಡಿಸದಿದ್ದರೆ
ಯೋಬನು 11:3
ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?
ಯೋಬನು 8:4
ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.
ಯೋಬನು 5:3
ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು.
ಯೋಬನು 4:6
ನಿನ್ನ ಭಯವೂ ಭರವಸೆಯೂ ನಿನ್ನ ನಿರೀಕ್ಷೆಯೂ ನಿನ್ನ ಮಾರ್ಗಗಳ ಯಥಾರ್ಥ ತೆಯೂ ಇವೇ ಅಲ್ಲವೋ?
ಅರಣ್ಯಕಾಂಡ 14:22
ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
ಯಾಜಕಕಾಂಡ 26:26
ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
ಆದಿಕಾಂಡ 42:7
ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.