Job 38:28
ಮಳೆಗೆ ತಂದೆ ಇದ್ದಾನೋ? ಇಲ್ಲವೆ ಮಂಜಿನ ಹನಿಗಳನ್ನು ಹುಟ್ಟಿಸು ವವನಾರು?
Job 38:28 in Other Translations
King James Version (KJV)
Hath the rain a father? or who hath begotten the drops of dew?
American Standard Version (ASV)
Hath the rain a father? Or who hath begotten the drops of dew?
Bible in Basic English (BBE)
Has the rain a father? or who gave birth to the drops of night mist?
Darby English Bible (DBY)
Hath the rain a father? or who begetteth the drops of dew?
Webster's Bible (WBT)
Hath the rain a father? or who hath begotten the drops of the dew?
World English Bible (WEB)
Does the rain have a father? Or who fathers the drops of dew?
Young's Literal Translation (YLT)
Hath the rain a father? Or who hath begotten the drops of dew?
| Hath | הֲיֵשׁ | hăyēš | huh-YAYSH |
| the rain | לַמָּטָ֥ר | lammāṭār | la-ma-TAHR |
| a father? | אָ֑ב | ʾāb | av |
| or | א֥וֹ | ʾô | oh |
| who | מִי | mî | mee |
| hath begotten | ה֝וֹלִ֗יד | hôlîd | HOH-LEED |
| the drops | אֶגְלֵי | ʾeglê | eɡ-LAY |
| of dew? | טָֽל׃ | ṭāl | tahl |
Cross Reference
ಯೆರೆಮಿಯ 14:22
ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
ಕೀರ್ತನೆಗಳು 147:8
ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
ಙ್ಞಾನೋಕ್ತಿಗಳು 3:20
ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
ಯೆರೆಮಿಯ 5:24
ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
ಯೆರೆಮಿಯ 10:13
ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
ಹೋಶೇ 14:5
ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.
ಯೋವೇಲ 2:23
ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
ಆಮೋಸ 4:7
ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
ಮತ್ತಾಯನು 5:45
ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
ಕೀರ್ತನೆಗಳು 65:9
ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.
ಯೋಬನು 38:8
ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು?
ಆದಿಕಾಂಡ 27:39
ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು.
ಧರ್ಮೋಪದೇಶಕಾಂಡ 33:13
ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ
ಧರ್ಮೋಪದೇಶಕಾಂಡ 33:28
ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.
1 ಸಮುವೇಲನು 12:17
ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು.
2 ಸಮುವೇಲನು 1:21
ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
1 ಅರಸುಗಳು 17:1
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ಯೋಬನು 5:9
ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.
ಯೋಬನು 29:19
ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು.
ಆದಿಕಾಂಡ 27:28
ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.