Matthew 7:1
ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ.
Matthew 7:1 in Other Translations
King James Version (KJV)
Judge not, that ye be not judged.
American Standard Version (ASV)
Judge not, that ye be not judged.
Bible in Basic English (BBE)
Be not judges of others, and you will not be judged.
Darby English Bible (DBY)
Judge not, that ye may not be judged;
World English Bible (WEB)
"Don't judge, so that you won't be judged.
Young's Literal Translation (YLT)
`Judge not, that ye may not be judged,
| Judge | Μὴ | mē | may |
| not, | κρίνετε | krinete | KREE-nay-tay |
| that | ἵνα | hina | EE-na |
| ye be not | μὴ | mē | may |
| judged. | κριθῆτε· | krithēte | kree-THAY-tay |
Cross Reference
ಲೂಕನು 6:37
ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
ಯಾಕೋಬನು 4:11
ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ
ರೋಮಾಪುರದವರಿಗೆ 2:1
ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.
ರೋಮಾಪುರದವರಿಗೆ 14:10
ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
ಮತ್ತಾಯನು 7:5
ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
ಲೂಕನು 6:41
ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?
ಮತ್ತಾಯನು 7:2
ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
1 ಕೊರಿಂಥದವರಿಗೆ 4:3
ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ.
ರೋಮಾಪುರದವರಿಗೆ 14:3
ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
ಯಾಕೋಬನು 3:1
ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
ಯೆಶಾಯ 66:5
ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
ಯೆಹೆಜ್ಕೇಲನು 16:52
ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.