ಮತ್ತಾಯನು 8:25
ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.
And | καὶ | kai | kay |
his | προσελθόντες | proselthontes | prose-ale-THONE-tase |
οἱ | hoi | oo | |
disciples | μαθηταὶ | mathētai | ma-thay-TAY |
came to | αὐτοῦ | autou | af-TOO |
awoke and him, | ἤγειραν | ēgeiran | A-gee-rahn |
him, | αὐτὸν | auton | af-TONE |
saying, | λέγοντες | legontes | LAY-gone-tase |
Lord, | Κύριε | kyrie | KYOO-ree-ay |
save | σῶσον | sōson | SOH-sone |
us: | ἡμᾶς, | hēmas | ay-MAHS |
we perish. | ἀπολλύμεθα | apollymetha | ah-pole-LYOO-may-tha |
Cross Reference
2 ಪೂರ್ವಕಾಲವೃತ್ತಾ 14:11
ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
2 ಪೂರ್ವಕಾಲವೃತ್ತಾ 20:12
ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
ಕೀರ್ತನೆಗಳು 10:1
ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?
ಕೀರ್ತನೆಗಳು 44:22
ಹೌದು, ನಿನ್ನ ನಿಮಿತ್ತ ದಿನ ವೆಲ್ಲಾ ಕೊಲ್ಲಲ್ಪಡುತ್ತೇವೆ; ಕೊಯ್ಗುರಿಗಳ ಹಾಗೆ ಎಣಿಸಲ್ಪಡುತ್ತೇವೆ.
ಯೆಶಾಯ 51:9
ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
ಯೋನ 1:6
ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
ಮಾರ್ಕನು 4:38
ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.
ಲೂಕನು 8:24
ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.