ಕೀರ್ತನೆಗಳು 23

1 ಕರ್ತನು ನನ್ನ ಕುರುಬನು; ಕೊರತೆಪಡೆನು.

2 ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.

3 ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ.

4 ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.

5 ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

6 ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.

1 A Psalm of David.

2 The Lord is my shepherd; I shall not want.

3 He maketh me to lie down in green pastures: he leadeth me beside the still waters.

4 He restoreth my soul: he leadeth me in the paths of righteousness for his name’s sake.

5 Yea, though I walk through the valley of the shadow of death, I will fear no evil: for thou art with me; thy rod and thy staff they comfort me.

6 Thou preparest a table before me in the presence of mine enemies: thou anointest my head with oil; my cup runneth over.

7 Surely goodness and mercy shall follow me all the days of my life: and I will dwell in the house of the Lord for ever.

Psalm 99 in Tamil and English

1 ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
The Lord reigneth; let the people tremble: he sitteth between the cherubims; let the earth be moved.

2 ಕರ್ತನು ಚೀಯೋನಿನಲ್ಲಿ ದೊಡ್ಡವನಾಗಿಯೂ ಎಲ್ಲಾ ಜನಗಳ ಮೇಲೆ ಉನ್ನತನಾಗಿಯೂ ಇದ್ದಾನೆ.
The Lord is great in Zion; and he is high above all the people.

3 ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ.
Let them praise thy great and terrible name; for it is holy.

4 ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
The king’s strength also loveth judgment; thou dost establish equity, thou executest judgment and righteousness in Jacob.

5 ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.
Exalt ye the Lord our God, and worship at his footstool; for he is holy.

6 ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
Moses and Aaron among his priests, and Samuel among them that call upon his name; they called upon the Lord, and he answered them.

7 ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.
He spake unto them in the cloudy pillar: they kept his testimonies, and the ordinance that he gave them.

8 ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.
Thou answeredst them, O Lord our God: thou wast a God that forgavest them, though thou tookest vengeance of their inventions.

9 ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
Exalt the Lord our God, and worship at his holy hill; for the Lord our God is holy.