ಕೀರ್ತನೆಗಳು 52

1 ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.

2 ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.

3 ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ.

4 ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.

5 ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.

6 ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು.

7 ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.

8 ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.

9 ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.

1 To the chief Musician, Maschil, A Psalm of David, when Doeg the Edomite came and told Saul, and said unto him, David is come to the house of Ahimelech.

2 Why boastest thou thyself in mischief, O mighty man? the goodness of God endureth continually.

3 Thy tongue deviseth mischiefs; like a sharp razor, working deceitfully.

4 Thou lovest evil more than good; and lying rather than to speak righteousness. Selah.

5 Thou lovest all devouring words, O thou deceitful tongue.

6 God shall likewise destroy thee for ever, he shall take thee away, and pluck thee out of thy dwelling place, and root thee out of the land of the living. Selah.

7 The righteous also shall see, and fear, and shall laugh at him:

8 Lo, this is the man that made not God his strength; but trusted in the abundance of his riches, and strengthened himself in his wickedness.

9 But I am like a green olive tree in the house of God: I trust in the mercy of God for ever and ever.

10 I will praise thee for ever, because thou hast done it: and I will wait on thy name; for it is good before thy saints.

Psalm 99 in Tamil and English

1 ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
The Lord reigneth; let the people tremble: he sitteth between the cherubims; let the earth be moved.

2 ಕರ್ತನು ಚೀಯೋನಿನಲ್ಲಿ ದೊಡ್ಡವನಾಗಿಯೂ ಎಲ್ಲಾ ಜನಗಳ ಮೇಲೆ ಉನ್ನತನಾಗಿಯೂ ಇದ್ದಾನೆ.
The Lord is great in Zion; and he is high above all the people.

3 ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ.
Let them praise thy great and terrible name; for it is holy.

4 ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
The king’s strength also loveth judgment; thou dost establish equity, thou executest judgment and righteousness in Jacob.

5 ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.
Exalt ye the Lord our God, and worship at his footstool; for he is holy.

6 ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
Moses and Aaron among his priests, and Samuel among them that call upon his name; they called upon the Lord, and he answered them.

7 ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.
He spake unto them in the cloudy pillar: they kept his testimonies, and the ordinance that he gave them.

8 ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.
Thou answeredst them, O Lord our God: thou wast a God that forgavest them, though thou tookest vengeance of their inventions.

9 ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
Exalt the Lord our God, and worship at his holy hill; for the Lord our God is holy.