Cross Reference
ಯೆಹೆಜ್ಕೇಲನು 11:16
ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
ಕೀರ್ತನೆಗಳು 71:3
ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
ಧರ್ಮೋಪದೇಶಕಾಂಡ 33:27
ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
1 ಯೋಹಾನನು 4:16
ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
ಕೀರ್ತನೆಗಳು 91:1
ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
ಧರ್ಮೋಪದೇಶಕಾಂಡ 33:1
ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
ಅರಣ್ಯಕಾಂಡ 13:1
ಕರ್ತನು ಮೋಶೆಯ ಸಂಗಡ ಮಾತನಾಡಿ
1 ತಿಮೊಥೆಯನಿಗೆ 6:11
ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
ಯೋಹಾನನು 6:56
ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ.
ಯೆಶಾಯ 8:14
ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
ಕೀರ್ತನೆಗಳು 91:9
ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ
ಕೀರ್ತನೆಗಳು 89:1
ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.
1 ಅರಸುಗಳು 13:1
ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
ವಿಮೋಚನಕಾಂಡ 33:14
ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.