ಕೀರ್ತನೆಗಳು 94:1
ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
O Lord | אֵל | ʾēl | ale |
God, | נְקָמ֥וֹת | nĕqāmôt | neh-ka-MOTE |
to whom vengeance | יְהוָ֑ה | yĕhwâ | yeh-VA |
God, O belongeth; | אֵ֖ל | ʾēl | ale |
to whom vengeance | נְקָמ֣וֹת | nĕqāmôt | neh-ka-MOTE |
belongeth, shew | הוֹפִֽיַע׃ | hôpiyaʿ | hoh-FEE-ya |
Cross Reference
ನಹೂಮ 1:2
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
ರೋಮಾಪುರದವರಿಗೆ 12:19
ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
ಯೆಶಾಯ 35:4
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
ಧರ್ಮೋಪದೇಶಕಾಂಡ 32:35
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
ಕೀರ್ತನೆಗಳು 80:1
1 ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
ಇಬ್ರಿಯರಿಗೆ 10:30
ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
2 ಥೆಸಲೊನೀಕದವರಿಗೆ 1:8
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
ಯೆರೆಮಿಯ 50:28
ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!
ಯೆಶಾಯ 59:17
ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
ಕೀರ್ತನೆಗಳು 50:2
ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
ಧರ್ಮೋಪದೇಶಕಾಂಡ 32:41
ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.