Cross Reference
ಕೀರ್ತನೆಗಳು 10:7
ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.
ಕೀರ್ತನೆಗಳು 59:12
ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ.
ಕೀರ್ತನೆಗಳು 109:17
ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
ಯಾಕೋಬನು 3:10
ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.