Base Word
שַׁדַּי
Short Definitionthe Almighty
Long Definitionalmighty, most powerful
Derivationfrom H7703
International Phonetic Alphabetʃɑd̪̚ˈd̪ɑi̯
IPA modʃɑˈdɑi̯
Syllablešadday
Dictionshahd-DAI
Diction Modsha-DAI
UsageAlmighty
Part of speechn-m

ಆದಿಕಾಂಡ 17:1
ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.

ಆದಿಕಾಂಡ 28:3
ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,

ಆದಿಕಾಂಡ 35:11
ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.

ಆದಿಕಾಂಡ 43:14
ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.

ಆದಿಕಾಂಡ 48:3
ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್‌ದೇಶದ ಲೂಜ್‌ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.

ಆದಿಕಾಂಡ 49:25
ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)

ವಿಮೋಚನಕಾಂಡ 6:3
ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.

ಅರಣ್ಯಕಾಂಡ 24:4
ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು--

ಅರಣ್ಯಕಾಂಡ 24:16
ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--

ರೂತಳು 1:20
ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು.

Occurences : 48

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்