Cross Reference
Leviticus 11:7
ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು.
Deuteronomy 14:8
ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.
Isaiah 65:4
ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
Isaiah 66:3
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
Matthew 8:30
ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.
Luke 8:32
ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.